HEDDING : Tips/instructions to reduce adverse effects during extreme heat waves...
ಭಾರತ ಹವಾಮಾನ ಇಲಾಖೆ (IMD) ಯು ಉಲ್ಲೇಖಿತ ಪತ್ರಿಕಾ ಪ್ರಕಟಣೆಯಲ್ಲಿ 2025ರ ಬಿಸಿ ವಾತಾವರಣ ಅವಧಿಯಲ್ಲಿ (ಮಾರ್ಚ್‌ನಿಂದ ಮೇ (MAM)), ಉತ್ತರ ಒಳನಾಡು ಜಿಲ್ಲೆಗಳಿಗೆ ಹೆಚ್ಚಿನ ಭಾಗಗಳಲ್ಲಿ ಮತ್ತು ಕರಾವಳಿ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಸಾಧ್ಯತೆಗಳಿದೆ. ಆದರೆ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಬಹುತೇಕ ಭಾಗಗಳಲ್ಲಿ ಮತ್ತು ಮಲೆನಾಡು ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನದಿಂದ ಗರಿಷ್ಠ ತಾಪಮಾನದ ಸಾಧ್ಯತೆಗಳಿದೆ ಎಂದು. ಹಾಗೂ ಬಿಸಿಗಾಳಿ ದಿನಗಳ ಬಗ್ಗೆ 2025ರ ಬೇಸಿಗೆ (ಮಾರ್ಚ್ - ಮೆ) ಅವಧಿಗೆ ರಾಜ್ಯದ ಹಲವೆಡೆ 2 ರಿಂದ 14 ದಿನಗಳು ಬಿಸಿಗಾಳಿ ದಿನಗಳು ಕಾಣಬರುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿರುತ್ತಾರೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಆದುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ನೀಡುವುದು ಅವಶ್ಯವಿರುತ್ತದೆಂದು ತೀರ್ಮಾನಿಸಿ, ಈ ಕೆಳಕಂಡ ಸಲಹೆ/ಸೂಚನೆಗಳನ್ನು ನೀಡಲಾಗಿದೆ:
I ಅತೀ ಹೆಚ್ಚು ತಾಪಮಾನದಿಂದ(heat wave) ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:
ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ).
i. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವುದು.
ii. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟಿಗಳನ್ನು ಧರಿಸುವುದು.
iii. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.
iv. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು /ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ / ಪೆಂಡಾಲ್‌ನ ವ್ಯವಸ್ಥೆ ಮಾಡುವುದು, ಉತ್ತಮ ಗಾಳಿಯ (Air Circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು, ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.
vi. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
vii. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
viii. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
ix. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.
x. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.
xi. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
xii. ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
xiii. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
xiv. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.
xv. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್/ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್/ಗ್ಲೋಕೋಸ್/ ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heat wave) ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
xvi. ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವುದು.
No comments:
Post a Comment