Sunday, May 11, 2025

2025 SSLC And in the secondary PUC examination Applications are invited for the children's talent award of Karnataka State Government Employees who have scored more than 90% and 90%

  Wisdom News       Sunday, May 11, 2025
Subject : 2025 SSLC And in the secondary PUC examination Applications are invited for the children's talent award of Karnataka State Government Employees who have scored more than 90% and 90%...


ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 'ಪ್ರತಿಭಾ ಪುರಸ್ಕಾರ' ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಮತ್ತು 90%ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



-: ಅರ್ಜಿ ಸಲ್ಲಿಸಲು ನಿಬಂಧನೆಗಳು :-

1. ಶೇ.90% ಮತ್ತು 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ Online ನಲ್ಲಿ ಅರ್ಜಿ ಸಲ್ಲಿಸುವುದು.

2. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು ಹಾಗೂ ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು.

3. ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ Online ನಲ್ಲಿ Upload ಮಾಡುವುದು.

4. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

5. ಕೋರಿರುವ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು Upload ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

6. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025



logoblog

Thanks for reading 2025 SSLC And in the secondary PUC examination Applications are invited for the children's talent award of Karnataka State Government Employees who have scored more than 90% and 90%

Previous
« Prev Post

No comments:

Post a Comment