Subject : About the recruitment of guest lecturers/teachers temporarily for the academic interests of the students in the face of vacant lecturers/teachers in the Minority Welfare Department in 2025-26.....
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025 2026 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಅವಶ್ಯಕವಿರುತ್ತದೆ.
ಸದರಿ ಅಂಶಗಳ ಹಿನ್ನೆಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ಶಿಕ್ಷಕರನ್ನು ಹುದ್ದೆಗಳಿಗೆ ಎದುರಾಗಿ ಈ ಕೆಳಕಂಡ ಷರತ್ತು ಮತ್ತು ಮಾರ್ಗಸೂಚಿಗಳಂತೆ ಅತಿಥಿ ಶಿಕ್ಷಕರನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಹಂತದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.
No comments:
Post a Comment