Hedding : Guidelines on transfers of government employees for the year 2025-26...
2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ.
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ಬೆಂಗಳೂರು, ದಿನಾಂಕ:12.05.2025
ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.
2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-
(1) "ಸಕ್ಷಮ ಪ್ರಾಧಿಕಾರ" ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.
(2) "ವರ್ಗಾವಣೆ" ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ನಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.
(3) "ಚಲನವಲನ" ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.
No comments:
Post a Comment