HEDDING : Regarding the revision of the honorarium of guest teachers/guest lecturers.....
ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಶಿಕ್ಷಕರ / ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಿಸುವ ಬಗ್ಗೆ..
ಓದಲಾಗಿದೆ:
1.ಸರ್ಕಾರದ ಆದೇಶ ಸಂಖ್ಯೆ: ಇಡಿ 208 ಡಿಜಿಡಿ 2016, 2:14.03.2017.
2. ಸರ್ಕಾರದ ಆದೇಶ ಸಂಖ್ಯೆ: ಇಪಿ 14 ಎಸ್‌ಇಎಸ್ 2022, 2:18/06/2022.
3.ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ಪತ್ರ 24(1) ......01/2023-24, ໖: 10.10.2023.
4.ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 341 ವೆಚ್ಚ-8 20250, 2:11.04.2025 ໖ Budget Advice.
ಪ್ರಸ್ತಾವನೆ:-
ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಸರ್ಕಾರದ ಆದೇಶದಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರ ಸರ್ಕಾರದ ಆದೇಶದಲ್ಲಿ ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/-ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿ ಆದೇಶಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ದಿನಾಂಕ:10.10.2023 ರ ಪತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರುಗಳಿಗೆ ವಸ್ತುತ ನೀಡಲಾಗುತ್ತಿರುವ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ಪರಿಷ್ಕರಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
No comments:
Post a Comment